ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಸೇನಾಪಡೆಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು ಪರಿಣಾಮ ಓರ್ವ ಸೇನಾಧಿಕಾರಿ ಹುತಾತ್ಮರಾಗಿ ಮೂವರು ಸೈನಿಕರು ಗಾಯಗೊಂಡಿದ್ದಾರೆ.
ಶ್ರೀನಗರದ ಹೊರವಲಯದಲ್ಲಿರುವ ಲಾವಾಯ್‌ಪೊರಾದಲ್ಲಿ ಈ ದಾಳಿ ಸಂಭವಿಸಿದ್ದು, ಸೇನಾಪಡೆಗಳ ವಾಹನಗಳನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಓರ್ವ ಅಧಿಕಾರಿ ಹುತಾತ್ಮರಾಗಿದ್ದು, ಹುತಾತ್ಮರಾದ ಸೇನಾಧಿಕಾರಿಯನ್ನು ತ್ರಿಪುರಾ ಮೂಲದ ಮಂಗಾ ರಾಮ್ ದೇವ್ ಬರ್ಮನ್ ಎಂದು ಗುರುತಿಸಲಾಗಿದೆ. ಇವರು ಸಿಆರ್ ಪಿಎಫ್ ಸಬ್ ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಅಂತೆಯೇ ಘಟನೆಯಲ್ಲಿ ಇತರೆ ಮೂವರು ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡ ಸೈನಿಕರನ್ನು ಕಾನ್‌ಸ್ಟೆಬಲ್ ನಜೀಮ್ ಅಲಿ, ಜಗನ್ನಾಥ್ ರೇ ಮತ್ತು ಅಶೋಕ್ ಕುಮಾರ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಸೈನಿಕರನ್ನು ಸ್ಥಳೀಯ ಮಿಲಿಟರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಹಿಂದೆ ಇದೇ ಜಮ್ಮು ಮತ್ತು ಕಾಶ್ಮೀರದ ಲಾವಾಯ್‌ಪೊರಾದ ಪರೀಂಪೊರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಆರ್‌ಪಿಎಫ್ ಪಡೆಯ ಮೇಲೆ ಉಗ್ರರು ಗುಂಡು ಹಾರಿಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
'ಮಧ್ಯಾಹ್ನ 3:45 ರ ಸುಮಾರಿನಲ್ಲಿ ಸೇನಾಪಡೆಗಳ ಬೆಂಗಾವಲು ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದರು. ಈ ದಾಳಿಯಲ್ಲಿ ಓರ್ವ ಸೇನಾಧಿಕಾರಿ ಸಾವನ್ನಪ್ಪಿದ್ದು, ಮೂರು ಮಂದಿ ಸೈನಿಕರು ಗಾಯಗೊಂಡಿದ್ದಾರೆ. ಇದೊಂದು ಹಿಟ್ ಅಂಡ್ ರನ್ ದಾಳಿಯಾಗಿದ್ದು, ದಾಳಿ ಬಳಿಕ ಭಯೋತ್ಪಾದಕರು ಪರಾರಿಯಾಗಿದ್ದಾರೆ. ಪ್ರಸ್ತುತ ಘಟನಾ ಪ್ರದೇಶವನ್ನು ಸೇನಾ ಪಡೆಗಳು ಸುತ್ತವರೆದಿದ್ದು, ಉಗ್ರರು ಪರಾರಿಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಪ್ರದೇಶದ ಸುತ್ತಮುತ್ತ ಸೈನಿಕರು ನಾಕಾಬಂದಿ ಹಾಕಲಾಗಿದೆ. ಶೀಘ್ರದಲ್ಲೇ ಉಗ್ರರನ್ನು ಸೆರೆ ಹಿಡಿಯಲಾಗುತ್ತದೆ ಅಥವಾ ಎನ್ ಕೌಂಟರ್ ನಲ್ಲಿ ಹತ ಕೊಲ್ಲಲಾಗುತ್ತದೆ ಎಂದು ಸಿಆರ್ಪಿಎಫ್ ಡಿಐಜಿ ಕಿಶೋರ್ ಪ್ರಸಾದ್ ಹೇಳಿದ್ದಾರೆ.
**ಓಂ ಶ್ರೀ ಸಾಯಿ ಗಣಪತಿ ಜ್ಯೋತಿಷ್ಯ ಕೇಂದ್ರ**
Comments
Post a Comment